ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ 2026 – DWCD Yadgiri Recruitment 2026

DWCD Yadgiri Recruitment 2026

DWCD Yadgiri Recruitment 2026 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DWCD Yadgiri Recruitment 2026 : Details of Vacancies

ಹುದ್ದೆ :

ಜಿಲ್ಲಾ ಸಂಪನ್ಮೂಲ ವ್ಯಕ್ತಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು :

  • ಎಂ.ಎ ಸಮಾಜ ಶಾಸ್ತ್ರ ಅಥವಾ ಎಮ್.ಎಸ್.ಡಬ್ಲ್ಯೂ ಉತ್ತೀರ್ಣರಾಗಿರಬೇಕು
  • ಅಭ್ಯರ್ಥಿಗಳು ಶಾಲಾ ಪೂರ್ವ ಶಿಕ್ಷಣದಲ್ಲಿ ಅಥವಾ ಮಕ್ಕಳ ಕಲಿಕಾ ವಿಷಯ, ಅಥವಾ ಬೋಧನಾ ಕ್ಷೇತ್ರದಲ್ಲಿ (ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ) ಅಥವಾ ಸ್ವಯಂ ಸೇವ ಸಂಸ್ಥೆಗಳೊಂದಿಗೆ ಕನಿಷ್ಠ 4 ರಿಂದ 5 ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿರತಕ್ಕದ್ದು.

ಉದ್ಯೋಗ ಮಾಹಿತಿ : ಕೆನರಾ ಬ್ಯಾಂಕಿನಲ್ಲಿ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.

ಆಯ್ಕೆ ವಿಧಾನ :

ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000/- ಗೌರವಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಸಲ್ಲಿಸಬೇಕಾದ ದಾಖಲೆಗಳು :

  • ನಿಗದಿತ ನಮೂನೆಯಲ್ಲಿ ಅರ್ಜಿ
  • ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
  • ಹುದ್ದೆಗೆ ನಿಗದಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು.
  • ಅನುಭವ ಪ್ರಮಾಣ ಪತ್ರಗಳು.
  • ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 25, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 09, 2026

DWCD Yadgiri Recruitment 2026 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment