
Bengaluru Rural District Court Recruitment 2026 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bengaluru Rural District Court Recruitment 2026 : Details of Vacancies
ಹುದ್ದೆ :
ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಜವಾನ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 86 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಬೆರಳಚ್ಚುಗಾರರು | 8 |
| ಬೆರಳಚ್ಚು ನಕಲುಗಾರರು | 18 |
| ಆದೇಶ ಜಾರಿಕಾರರು | 24 |
| ಜವಾನ | 36 |
ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರರು –
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು –
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ಶ್ರೇಣಿ ಬೆರಳಚ್ಚು ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರು –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಮೋಟಾರು ವಾಹನ ಚಾಲನಾ ಅನುಜ್ಞಾ ಪತ್ರ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಜವಾನ –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರತಕ್ಕದ್ದು.
ಉದ್ಯೋಗ ಮಾಹಿತಿ : ಗದಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ವಯೋಮಾನ (ದಿನಾಂಕ 06/11/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷ
- ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷ
ವೇತನ :
| ಹುದ್ದೆ | ವೇತನ |
| ಬೆರಳಚ್ಚುಗಾರರು | ರೂ. 34,100 – ರೂ. 67,600 |
| ಬೆರಳಚ್ಚು ನಕಲುಗಾರರು | ರೂ. 34,100 – ರೂ. 67,600 |
| ಆದೇಶ ಜಾರಿಕಾರರು | ರೂ. 31,775 – ರೂ. 61,300 |
| ಜವಾನ | ರೂ. 27,000 – ರೂ. 46,675 |
ಆಯ್ಕೆ ವಿಧಾನ :
- ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮತ್ತು ಸಂದರ್ಶನದಲ್ಲಿ ಪಡೆದ ಅಂಕ ಇವುಗಳ ಮೊತ್ತದ ಜ್ಯೇಷ್ಠತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಆದೇಶ ಜಾರಿಕಾರ & ಜವಾನ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರುವಿನ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕೆನರಾ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾ ನ್ಯಾಯಾಲಯವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 200
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 06, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 06, 2026
Bengaluru Rural District Court Recruitment 2026 : Important Links
| TYPIST NOTIFICATION | CLICK HERE |
| TYPIST COPYIST NOTIFICATION | CLICK HERE |
| PROCESS SERVER NOTIFICATION | CLICK HERE |
| PEON NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.