
RRB Station Master Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Station Master Recruitment 2026 : Details of Vacancies
ಹುದ್ದೆ :
ಸ್ಟೇಷನ್ ಮಾಸ್ಟರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1,215 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಇಸ್ರೋದಿಂದ ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 01/01/2027ಕ್ಕೆ) :
- ಕನಿಷ್ಠ 20 ವರ್ಷ ಪೂರೈಸಿರಬೇಕು
- ಗರಿಷ್ಠ 33 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
- ಕಂಪ್ಯೂಟರ್ ಬೇಸ್ಡ್ ಅಪ್ಟಿಟ್ಯೂಡ್ ಟೆಸ್ಟ್ (CBAT)
- ಡಾಕ್ಯುಮೆಂಟ್ ವೆರಿಫಿಕೇಶನ್
- ಮೆಡಿಕಲ್ ಎಕ್ಸಾಂಮಿನೇಶನ್
ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT) ಮಾದರಿ –
| CBT | No. of Questions | Duration |
| Basic Science, Mathematical and Analytical Capability | 60 | – |
| Logical Capability | 20 | – |
| Mental Reasoning | 20 | – |
| Total | 100 | 120 Minutes |
ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಮಹಿಳಾ, ಟ್ರಾನ್ಸಜೆಂಡರ್, ಮಾಜಿ ಸೈನಿಕ, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250 (CBT ಪರೀಕ್ಷೆಗೆ ಹಾಜರಾದ ನಂತರ ಅನ್ವಯವಾಗುವ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 250 ಮರುಪಾವತಿಸಲಾಗುತ್ತದೆ)
- ಉಳಿದ ಅಭ್ಯರ್ಥಿಗಳಿಗೆ – ರೂ. 500 (CBT ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 400 ಮರುಪಾವತಿಸಲಾಗುತ್ತದೆ)
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 25, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2026
Railway Station Master Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.