ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Ramanagara District Court Stenographer Recruitment 2026

Ramanagara District Court Stenographer Recruitment 2026

Ramanagara District Court Stenographer Recruitment 2026 : ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ramanagara District Court Stenographer Recruitment 2026 : Details of Vacancies

ಹುದ್ದೆ :

ಶೀಘ್ರಲಿಪಿಗಾರರು ಗ್ರೇಡ್-3

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

  • ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ.
  • ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆ ಜ್ಞಾನ ಅವಶ್ಯಕವಾಗಿರುತ್ತದೆ.

ಉದ್ಯೋಗ ಮಾಹಿತಿ : ಕೆಇಎಯಿಂದ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ 2026

ವಯೋಮಾನ (30/11/2026ಕ್ಕೆ) :

  • ಕನಿಷ್ಠ 18 ವರ್ಷ
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,425 ರಿಂದ ರೂ. 83,700 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಸಂದರ್ಶನಕ್ಕೆ 10 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು – ರೂ. 100
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2026

Ramanagara District Court Stenographer Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment