ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಹಿಳಾ ಮೇಲ್ವಿಚಾರಕಿಯರು ಹುದ್ದೆಗಳ ನೇಮಕಾತಿ 2026 – WCD Karnataka Women Supervisor Recruitment 2026

WCD Karnataka Women Supervisor Recruitment 2026

WCD Karnataka Women Supervisor Recruitment 2026 : ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಮಹಿಳಾ ಮೇಲ್ವಿಚಾರಕಿಯರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Karnataka Women Supervisor Recruitment 2026 : Details of Vacancies

ಹುದ್ದೆ :

ಮಹಿಳಾ ಮೇಲ್ವಿಚಾರಕಿಯರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 171 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 141
ಕಲ್ಯಾಣ ಕರ್ನಾಟಕ ವೃಂದ 30

ಶೈಕ್ಷಣಿಕ ವಿದ್ಯಾರ್ಹತೆ :

ಹೋಮ್ ಸೈನ್ಸ್ ಅಥವಾ ಸೋಷಿಯಲ್ ವರ್ಕ್ ಅಥವಾ ಸೋಷಿಯಾಲಜಿ ಅಥವಾ ಬಿ.ಎಸ್ಸಿ (ಹೋಮ್ ಸೈನ್ಸ್/ ಕಮ್ಯೂನಿಟಿ ಸೈನ್ಸ್) ನಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎಯಿಂದ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ 2026

ವಯೋಮಿತಿ (ದಿನಾಂಕ 28/11/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು.
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,425 ರಿಂದ ರೂ. 83,700 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್‌ಲೈನ್‌ (ಸಿಬಿಟಿ) ಅಥವಾ ಆಫ್‌ಲೈನ್‌-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು ಅಂಕಗಳನ್ನು ಕಳೆಯಲಾಗುವುದು)

ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಹಿಳಾ ಮೇಲ್ವಿಚಾರಕಿಯರು ಹುದ್ದೆಗಳ ನೇಮಕಾತಿ 2026 – WCD Karnataka Women Supervisor Recruitment 2026

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
  • ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
  • ವಿಶೇಷಚೇತನ ಅಭ್ಯರ್ಥಿಗಳು – ರೂ. 250

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 03, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 28, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 29, 2026

WCD Karnataka Women Supervisor Recruitment 2026 : Important Links

NOTIFICATION (RPC)CLICK HERE
NOTIFICATION (KK)CLICK HERE
APPLY ONLINE CLICK HERE
Telegram Join Link Click Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment