Urban Cooperative Bank Recruitment 2021 : ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಜೂನಿಯರ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Urban Cooperative Bank Recruitment 2021 : Details of Vacancies
ಹುದ್ದೆ : ಜೂನಿಯರ್ ಕ್ಲರ್ಕ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ಜೊತೆಗೆ ಅಭ್ಯರ್ಥಿಗಳಿಗೆ ಕನ್ನಡ ಓದುವ, ಬರೆಯುವ, ಅರ್ಥ ಮಾಡಿಕೊಳ್ಳುವ ಜ್ಞಾನ ಮತ್ತು ಸರಾಗವಾಗಿ ಕನ್ನಡ ಮಾತನಾಡಲು ಬರುವಂತಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : Vikas Bank Recruitment 2021 : ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ 200 ಅಂಕಗಳನ್ನು ಒಳಗೊಂಡಿರುತ್ತದೆ. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲೀಷ್ ಗೆ 25 ಅಂಕಗಳು, ಸಾಮಾನ್ಯ ಜ್ಞಾನಕ್ಕೆ 25 ಅಂಕಗಳು, ಸಹಕಾರ ವಿಷಯಕ್ಕೆ 50 ಅಂಕಗಳು, ಭಾರತೀಯ ಸಂವಿಧಾನಕ್ಕೆ 25 ಅಂಕಗಳು ಹಾಗೂ ಬ್ಯಾಂಕಿನ ಉದ್ದೇಶಗಳು ಮತ್ತು ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಕ್ಕೆ 25 ಅಂಕಗಳು ಇರುತ್ತದೆ.
ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಜೂನಿಯರ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಚೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಪ್ರಧಾನ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯ ಫಾರ್ಮನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ, ಅರ್ಜಿ ನಮೂನೆಯಲ್ಲಿ ತಿಳಿಸಿದಂತಹ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಹಾಜರಾಗಿ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು, ಹೊನ್ನಾವರ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್ ಲಿಮಿಟೆಡ್,
ಪ್ರಧಾನ ಕಛೇರಿ : ಹೊನ್ನಾವರ, ಬ್ಯಾಂಕ್ ರಸ್ತೆ, ಹೊನ್ನಾವರ ~ 581 334 (ಉತ್ತರ ಕನ್ನಡ)
ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 250 ಪಾವತಿಸಿ ಬ್ಯಾಂಕಿನ ಪ್ರಧಾನ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 13, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 03, 2021
Urban Cooperative Bank Recruitment 2021 : Important Links
ಅಧಿಸೂಚನೆ : Click Here
ಈ ನೇಮಕಾತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುವುದು
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.