IBPS RRB Notification 2021 : 10676 ಆಫೀಸರ್ಸ್, ಕಚೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

IBPS RRB Notification 2021 : ಬ್ಯಾಂಕಿನ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಅಗತ್ಯವಿರುವ ಆಫೀಸರ್ಸ್ ಹಾಗೂ ಕಚೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IBPS RRB Notification 2021 : Details of Vacancies

ಹುದ್ದೆ : ಆಫೀಸರ್ಸ್ (ಸ್ಕೇಲ್ 1,2,3) ಹಾಗೂ ಕಚೇರಿ ಸಹಾಯಕ (ಮಲ್ಟಿಪರ್ಪಸ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10676 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಎಂಬಿಎ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಾನ :

ಹುದ್ದೆವಯೋಮಾನ
ಆಫೀಸರ್ಸ್ ಸ್ಕೇಲ್ 118-30 ವರ್ಷ
ಆಫೀಸರ್ಸ್ ಸ್ಕೇಲ್ 221-32 ವರ್ಷ
ಆಫೀಸರ್ಸ್ ಸ್ಕೇಲ್ 321-40 ವರ್ಷ
ಕಚೇರಿ ಸಹಾಯಕ18-28 ವರ್ಷ

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಿಂಗಲ್ ಲೆವೆಲ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಧಾರವಾಡ ಜಿಲ್ಲಾ ಪಂಚಾಯತ ನೇಮಕಾತಿ 2021

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 175, ಉಳಿದ ಅಭ್ಯರ್ಥಿಗಳು ರೂ. 850 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 08, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 28, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 28, 2021

IBPS RRB Notification 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook