Bangalore Urban Zilla Panchayat Recruitment 2021 : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bangalore Urban Zilla Panchayat Recruitment 2021 : Details of Vacancies
ಹುದ್ದೆ : ರೀಜನಲ್ ಪ್ಲಾನಿಂಗ್ ಸ್ಪೆಷಲಿಸ್ಟ್, ರೂರಲ್ ಡೆವಲಪ್ಮೆಂಟ್ ಅಂಡ್ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್, ಇಂಜಿನಿಯರಿಂಗ್ ಸ್ಪೆಷಲಿಸ್ಟ್, ಸ್ಪೆಷಿಯಲ್ ಪ್ಲಾನಿಂಗ್ ಪ್ರೊಫೆಷನಲ್, ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಯಾವುದೇ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪದವಿ ಹೊಂದಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಅಗತ್ಯ.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ರಿಂದ ರೂ. 30,000 ವರೆಗೂ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಸ್ವೀಕರಿಸಿದ ಅರ್ಜಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಮತ್ತು ಕಾರ್ಯಾನುಭವ ಆಧಾರದ ಮೇಲೆ 1:5 ಅನುಪಾತದಲ್ಲಿ ಕಿರುಪಟ್ಟಿಯನ್ನು ತಯಾರಿಸಿ ಸದರಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗಾವಕಾಶ
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ವಿದ್ಯಾರ್ಹತೆ ಹಾಗೂ ಅನುಭವದ ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ, ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಬೆಂಗಳೂರು ನಗರ,
(ಡಿ.ಆರ್.ಡಿ.ಎ ಶಾಖೆ) ಜಿಲ್ಲಾ ಪಂಚಾಯತ ಕಛೇರಿ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು 560070
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 31, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 20, 2021
Bangalore Urban Zilla Panchayat Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 9901031755
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.