PGCIL Recruitment 2021 | 35 ಡಿಪ್ಲೋಮಾ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

PGCIL Recruitment 2021 : ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

PGCIL Recruitment 2021 : Details of Vacancies

ಹುದ್ದೆ : ಡಿಪ್ಲೋಮಾ ಟ್ರೈನಿ (ಇಲೆಕ್ಟ್ರಿಕಲ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಾನ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ನಿಗದಿಪಡಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 03 ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ಉದ್ಯೋಗ ಮಾಹಿತಿ : ವಾಕರಸಾ ಸಂಸ್ಥೆ ನೌಕರರ ಸಹಕಾರಿ ಪತ್ತಿನ ಸಂಘದಲ್ಲಿ ನೇಮಕಾತಿ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,500 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೂ. 300 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 09, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 29, 2021

PGCIL Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook