KSSFCL Recruitment 2021 – ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSSFCL Recruitment 2021 : Details of Vacancies
ಹುದ್ದೆ : ಸಿವಿಲ್ ಇಂಜಿನಿಯರ್ (ವ್ಯವಸ್ಥಾಪಕ ಶ್ರೇಣಿ), ಸಹಾಯಕರು, ಉಪ ಸಿಬ್ಬಂದಿ ಕಮ್ ವಾಹನ ಚಾಲಕ, ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್), ಸ್ವೀಪರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಿವಿಲ್ ಇಂಜಿನಿಯರ್ | 02 | 30,000/- |
ಸಹಾಯಕರು | 16 | 18,000/- |
ಉಪ ಸಿಬ್ಬಂದಿ ಕಮ್ ವಾಹನ ಚಾಲಕ | 06 | 16,000/- |
ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್) | 06 | 14,000/- |
ಸ್ವೀಪರ್ | 02 | 12,000/- |
ಶೈಕ್ಷಣಿಕ ಅರ್ಹತೆ :
• ಸಿವಿಲ್ ಇಂಜಿನಿಯರ್ (ವ್ಯವಸ್ಥಾಪಕ ಶ್ರೇಣಿ) ಹುದ್ದೆಗೆ ಸಿವಿಲ್ ಇಂಜಿನಿಯರ್ ವಿಷಯದಲ್ಲಿ ಪದವಿ ಜೊತೆಗೆ ಕನಿಷ್ಠ ಎರಡು ವರ್ಷ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
• ಸಹಾಯಕರು ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಅಥವಾ ಸಹಕಾರ ವಿಷಯದಲ್ಲಿ ಪದವಿ ಅರ್ಹತೆ ಹೊಂದಿರಬೇಕು.
• ಉಪ ಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಕ್ಷಮ ಪ್ರಾಧಿಕಾರದಿಂದ ಮೋಟಾರ್ ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು. ಲಘುವಾಹನ ಚಾಲಕರಾಗಿ ಎರಡು ವರ್ಷ ಅನುಭವ ಹೊಂದಿದವರಿಗೆ ಆದ್ಯತೆ.
• ಉಪ ಸಿಬ್ಬಂದಿ (ಪ್ಯೂನ್/ಅಟೆಂಡರ್) ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಸ್ವೀಪರ್ ಹುದ್ದೆಗೆ 7ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಹಾಯಕ ಹುದ್ದೆಗೆ ಗರಿಷ್ಠ 36 ವರ್ಷ, ಉಪಸಿಬ್ಬಂದಿ ಕಂ ವಾಹನ ಚಾಲಕ ಹುದ್ದೆಗೆ ಗರಿಷ್ಠ 32 ವರ್ಷ, ಉಪಸಿಬ್ಬಂದಿ ಹುದ್ದೆಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯ್ತಿಯಲ್ಲಿ 295 ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಸಂಯುಕ್ತ ಸಹಕಾರಿಯ ಕೇಂದ್ರ ಕಛೇರಿಗೆ ತಲುಪುವಂತೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.,
ನಿರ್ಮಾಣ ಭವನ, ಡಾ. ರಾಜಕುಮಾರ ರಸ್ತೆ, 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು – 560010
ಅರ್ಜಿ ಶುಲ್ಕ : ಸಿವಿಲ್ ಇಂಜಿನಿಯರ್, ಸಹಾಯಕ ಹುದ್ದೆಗೆ ರೂ. 1,000 ಹಾಗೂ ಉಳಿದ ಹುದ್ದೆಗಳಿಗೆ ರೂ. 500 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ‘ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.’ ಈ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯವಾಗುವಂತೆ ಡಿ.ಡಿ ತೆಗೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 20, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2021
KSSFCL Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.