Union Bank Recruitment 2021 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IDBI Bank Recruitment 2021 : Details of Vacancies
ಹುದ್ದೆ : ಹಿರಿಯ ವ್ಯವಸ್ಥಾಪಕರು, ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 347 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ವಯೋಮಾನ | ವೇತನ |
ಹಿರಿಯ ವ್ಯವಸ್ಥಾಪಕರು | 30-40 | ರೂ. 63,840 |
ವ್ಯವಸ್ಥಾಪಕರು | 25-35 | ರೂ. 48,170 |
ಸಹಾಯಕ ವ್ಯವಸ್ಥಾಪಕರು | 20-30 | ರೂ. 36,000 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ : ಗುಂಪು ಚರ್ಚೆ ಹಾಗೂ ಆನ್ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ ಒಬಿಸಿ ಅಭ್ಯರ್ಥಿಗಳು ರೂ. 850 ಪಾವತಿಸಬೇಕು. ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 12, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2021
Union Bank Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.