Bidar District Court Recruitment 2021 – Apply Online for 21 Stenographer, Typist Jobs

Bidar District Court Recruitment 2021 : ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bidar District Court Recruitment 2021 : Details of Vacancies

ಹುದ್ದೆ : ಸ್ಟೆನೊಗ್ರಾಫರ್ ಗ್ರೇಡ್ 3 ಮತ್ತು ಟೈಪಿಸ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸ್ಟೆನೊಗ್ರಾಫರ್ ಗ್ರೇಡ್ 31227650-52650
ಟೈಪಿಸ್ಟ್0921400-42000

ಶೈಕ್ಷಣಿಕ ಅರ್ಹತೆ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸ್ಟೆನೊಗ್ರಾಫರ್ ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಹಾಗೂ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. ಟೈಪಿಸ್ಟ್ ಹುದ್ದೆಗೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೀದರ್ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರವರ್ಗ 2ಎ,2ಬಿ,3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 09, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 09, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 12, 2021

Bidar District Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

3 thoughts on “Bidar District Court Recruitment 2021 – Apply Online for 21 Stenographer, Typist Jobs”

Leave a Comment