Dakshina Kannada Zilla Panchayat Recruitment 2021 : ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Dakshina Kannada Zilla Panchayat Recruitment 2021 : Details of Vacancies
ಹುದ್ದೆ : ಆಡಳಿತ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕು ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ದಿನಾಂಕ 21/09/2021ಕ್ಕೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅನುಭವ : ಕನಿಷ್ಠ 2 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ
ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 14,543 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಮೆರಿಟ್ ಆಧಾರದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 21, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 10, 2021
Dakshina Kannada Zilla Panchayat Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.