KEA Recruitment 2021 : ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Recruitment 2021 : Details of Vacancies
ಹುದ್ದೆ : ಸಹಾಯಕ ಪ್ರಾಧ್ಯಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1242 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಭಾರತೀಯ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಶೇಕಡಾ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ ಮಾನ್ಯತೆ ಪಡೆದಿರುವ ವಿದೇಶಿ ವಿಶ್ವವಿದ್ಯಾಲಯದಿಂದ ಪಡೆದ ತತ್ಸಮಾನದ ಪದವಿ ಪಡೆದಿರಬೇಕು. ಮತ್ತು ಯುಜಿಸಿ ಅಥವಾ ಸಿ.ಎಸ್.ಐ.ಆರ್. ಮೂಲಕ ನಡೆಸಲಾದ “ರಾಷ್ಟ್ರೀಯ ಅರ್ಹತಾ ಪರೀಕ್ಷೆ”ಯಲ್ಲಿ ಅಥವಾ ಅಂಥ ಯುಜಿಸಿ “ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ” ಅಥವಾ “ಕೆಸೆಟ್” ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿರಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 57,700 – ರೂ. 1,82,400 ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಮಂಗಳೂರು ಸ್ಥಳಗಳಲ್ಲಿ ನಡೆಸಲಾಗುವುದು.
ಉದ್ಯೋಗ ಮಾಹಿತಿ : ತಾಲ್ಲೂಕು ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರವರ್ಗ 2ಎ,2ಬಿ,3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು ರೂ. 2000
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು ರೂ. 1000
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಕಂಪ್ಯೂಟರೈಸಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 06, 2021
ಇ-ಪೋಸ್ಟ್ ಆಫೀಸಿನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 10, 2021
KEA Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.