Mangalore Mahanagara Palike Recruitment 2021 : Apply Now 190 Post

Mangalore Mahanagara Palike Recruitment 2021 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mangalore Mahanagara Palike Recruitment 2021 : Details of Vacancies

ಹುದ್ದೆ : ಪೌರಕಾರ್ಮಿಕರು (ಗ್ರೂಪ್ ಡಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆ :
• ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
• ಕನ್ನಡ ಮಾತನಾಡಲು ಗೊತ್ತಿರಬೇಕು.
• ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ 45 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ : ಪ.ಜಾತಿ/ಪ.ಪಂ./ಪ್ರ1/ಅಂಗವಿಕಲ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ. 200 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ ನಲ್ಲಿ ಲಭ್ಯವಿರುವ PDF ಚಲನ್ ನ್ನು ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕ ಪಾವತಿ ಮಾಡತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 23, 2021

Mangalore Mahanagara Palike Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment