Karnataka High Court Recruitment 2021 – Apply Online for 150 Typist Vacancy

Karnataka High Court Recruitment 2021 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2021 : Details of Vacancies

ಹುದ್ದೆ : ಬೆರಳಚ್ಚುಗಾರರು (ಟೈಪಿಸ್ಟ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಗಳ ವರ್ಗೀಕರಣಹುದ್ದೆಗಳ ಸಂಖ್ಯೆ
ಉಳಿದ ಮೂಲವೃಂದ137
ಸ್ಥಳೀಯ ವೃಂದ13

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳ ವಯಸ್ಸು ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರೇ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ಬೆರಳಚ್ಚುಗಾರರು ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 200, ಉಳಿದ ಅಭ್ಯರ್ಥಿಗಳು ರೂ.350 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 27, 2021
ಆನ್‌ಲೈನ್‌ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 30, 2021

Karnataka High Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment