Vijayanagara Nirmithi Kendra Recruitment 2022 : ವಿಜಯನಗರ ನಿರ್ಮಿತಿ ಕೇಂದ್ರದಿಂದ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಅಕೌಂಟೆಂಟ್ ಮತ್ತು ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Vijayanagara Nirmithi Kendra Recruitment 2022 : Details of Vacancies
ಹುದ್ದೆ : ಅಕೌಂಟೆಂಟ್ ಮತ್ತು ಅಸಿಸ್ಟೆಂಟ್ ಅಕೌಂಟೆಂಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಅಕೌಂಟೆಂಟ್ ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಕಾಂ. ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಕೆಲಸದ ಅನುಭವ ಹೊಂದಿರಬೇಕು (ಟ್ಯಾಲಿ ಮತ್ತು ಎಂ.ಎಸ್. ಆಫೀಸ್ ಜ್ಞಾನ ಹೊಂದಿರಬೇಕು. ಆದಾಯ ತೆರಿಗೆ ಮತ್ತು ಜಿಎಸ್ಟಿಯ ಪ್ರಾಯೋಗಿಕ ಜ್ಞಾನ ಹೊಂದಿರಬೇಕು)
• ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಕಾಂ. ಪದವಿ ಜೊತೆಗೆ ಕೆಲಸದ ಅನುಭವ ಹೊಂದಿರಬೇಕು (ಟ್ಯಾಲಿ, ಎಂ.ಎಸ್. ಆಫೀಸ್ ಹಾಗೂ ಟೈಪಿಂಗ್ ಜ್ಞಾನ ಹೊಂದಿರಬೇಕು)
ವಯೋಮಾನ : ದಿನಾಂಕ 31-12-2021ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022
ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬಳ್ಳಾರಿ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2022
Vijayanagara Nirmithi Kendra Recruitment 2022 : Important Links
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.