Karnataka Bank Recruitment 2022 – Apply Now for Manager Post

Karnataka Bank Recruitment 2022 : ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Bank Recruitment 2022 : Details of Vacancies

ಹುದ್ದೆ : ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (01-12-2021ಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು)

ವಯೋಮಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ದಿನಾಂಕ 01/12/2021ಕ್ಕೆ ಒಳಗೊಂಡಂತೆ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,500 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಅರ್ಹತಾ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ, ನಂತರ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ನೇರ ನೇಮಕಾತಿ 2022

ಕರ್ನಾಟಕ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕಿನ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆ ಹಾಗೂ ನಿಗದಿತ ಡಿಡಿ ಜೊತೆಗೆ ಅಂಚೆ ಮೂಲಕ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಛೇರಿ,
ಮಹಾವೀರ ಸರ್ಕಲ್, ಕಂಕನಾಡಿ, ಮಂಗಳೂರು – 575002

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 600 (ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ‌. 400) ಡಿ.ಡಿ.ಯನ್ನು ‘Karnataka Bank Officer Grade Application Fee’ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 04, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 20, 2022

Karnataka Bank Recruitment 2022 : Important Links

ಅಧಿಸೂಚನೆ – Notification
ಅರ್ಜಿ ನಮೂನೆ – Application Form

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook