Dhfws Vijayanagara Recruitment 2022 – Apply Online for 09 Staff Nurse Posts

Dhfws Vijayanagara Recruitment 2022 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhfws Vijayanagara Recruitment 2022 : Details of Vacancies

ಹುದ್ದೆ : ಶುಶ್ರೂಷಣಾಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಸ್ಟಾಫ್ ನರ್ಸ್ ಹುದ್ದೆಗೆ ಎಂ.ಎಸ್ಸಿ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಮೊದಲ ಆದ್ಯತೆ ಎಂ.ಎಸ್ಸಿ ನರ್ಸಿಂಗ್, ಎರಡನೇ ಆದ್ಯತೆ ಬಿ.ಎಸ್ಸಿ ನರ್ಸಿಂಗ್, ಮೂರನೇ ಆದ್ಯತೆ ಜಿ.ಎನ್.ಎಂ ನರ್ಸಿಂಗ್)

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪೂರ್ವ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸದರಿ ಹುದ್ದೆಗಳನ್ನು 1:3 ಅನುಪಾತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಕೆ.ಇ.ಬಿ. ನೇಮಕಾತಿ 2022

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 18, 2022

Dhfws Vijayanagara Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment