Tumkur District Gram Panchayat Library Supervisor Recruitment 2022 : ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Tumkur District Gram Panchayat Library Supervisor Recruitment 2022 : Details of Vacancies
ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ತುಮಕೂರು ಜಿಲ್ಲೆಯ ಅಂಕಸಂದ್ರ, ಬಾಗೇನಹಳ್ಳಿ, ಬೇವಿನಹಳ್ಳಿ, ಭೈರನಾಯಕನಹಳ್ಳಿ, ಚೆನ್ನಕೇಶವಪುರ, ದಂಡಿನಶಿವರ, ಗರಣಿ, ಹುಳಿಯಾರು, ಕೆಂಕೆರೆ, ಕೊಡಗೆಹಳ್ಳಿ, ಮುದ್ದೇನಹಳ್ಳಿ, ನಡೆಮಾವಿನಪುರ, ನಾದೂರು, ನಲ್ಲಿಗಾನಹಳ್ಳಿ, ನಿಡವಳಲು, ನೊಣವಿನಕೆರೆ, ಸಿದ್ದಾಪುರ, ವಳ್ಳೂರು, ವಡ್ಡಗೆರೆ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಹುದ್ದೆ ಖಾಲಿ ಇದೆ.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಗೌರವ ಸಂಭಾವನೆ ನೀಡಲಾಗುವುದು.
ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೇರ ನೇಮಕಾತಿ – 10ನೇ ತರಗತಿ ಪಾಸ್
ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ
• ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು ಮತ್ತು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು.
• ಚುನಾವಣಾ ಗುರುತಿನ ಚೀಟಿ
• ಜಾತಿ ಪ್ರಮಾಣ ಪತ್ರ
• ಯಾವುದೇ ಮೀಸಲಾತಿಯನ್ನು/ಸಡಿಲಿಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ದೃಢೀಕೃತ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
• ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 14, 2022
Tumkur District Gram Panchayat Library Supervisor Recruitment 2022 : Important Links
ಅಧಿಸೂಚನೆ & ಅರ್ಜಿ ನಮೂನೆ | Click Here |
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ತುಮಕೂರು ಇವರನ್ನು ಸಂಪರ್ಕಿಸಬಹುದು
ದೂರವಾಣಿ : 0816-2278063
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
1 thought on “Tumkur District Gram Panchayat Library Supervisor Recruitment 2022 – Apply for Various Post”
Good job