Bangalore Urban Zilla Panchayat Recruitment 2022 : ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bangalore Urban Zilla Panchayat Recruitment 2022 : Details of Vacancies
ಹುದ್ದೆ : ಜಿಲ್ಲಾ ಐ.ಇ.ಸಿ ಸಂಯೋಜಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು, ತಾಲ್ಲೂಕು ಎಂ.ಐ.ಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಜಿಲ್ಲಾ ಐ.ಇ.ಸಿ ಸಂಯೋಜಕರು | 01 | Post Graduation |
ತಾಲ್ಲೂಕು ಐ.ಇ.ಸಿ ಸಂಯೋಜಕರು | 01 | Post Graduation |
ತಾಲ್ಲೂಕು ಎಂ.ಐ.ಎಸ್ ಸಂಯೋಜಕರು | 01 | BCA/Bsc/Diploma (Computer Science) |
ತಾಂತ್ರಿಕ ಸಹಾಯಕರು | 03 | B.E/B.Tech in Civil Engineering |
ತಾಂತ್ರಿಕ ಸಹಾಯಕರು (ಅರಣ್ಯ) | 01 | Bsc (Forestry) |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 01 | Bsc (Horticulture) |
ವಯೋಮಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022
ಮಾಸಿಕ ಸಂಭಾವನೆ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ರಿಂದ ರೂ. 30,000 ಮಾಸಿಕ ಸಂಭಾವನೆ ನೀಡಲಾಗುವುದು.
ಅನುಭವ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು – 560076
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 05, 2022
Bangalore Urban Zilla Panchayat Recruitment 2022 : Important Links
ಪ್ರಕಟಣೆ | Click Here |
ಅರ್ಜಿ ನಮೂನೆ | Click Here |
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ – 080-26716169
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.