Chamarajanagara District Court Recruitment 2022 – Apply Online for 26 Stenographer, Typist, Process Server Jobs

Chamarajanagara District Court Recruitment 2022 : ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chamarajanagara District Court Recruitment 2022 : Details of Vacancies

ಹುದ್ದೆ : ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸೇವಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು0327650-52650
ಬೆರಳಚ್ಚುಗಾರರು0221400-42000
ಬೆರಳಚ್ಚು ನಕಲುಗಾರರು0321400-42000
ಆದೇಶ ಜಾರಿಕಾರರು0619950-37900
ಸೇವಕರು1217000-28950

ಶೈಕ್ಷಣಿಕ ಅರ್ಹತೆ :
• ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ
ಶೀಘ್ರಲಿಪಿಗಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಮತ್ತು ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರ್ಯಾಕ್ಟಿಸ್/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರ್ಯಾಕ್ಟಿಸ್/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರ್ಯಾಕ್ಟಿಸ್/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಆದೇಶ ಜಾರಿಕಾರರು ಮತ್ತು ಸೇವಕರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ಆದೇಶ ಜಾರಿಕಾರರು ಹುದ್ದೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಸೇವಕ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ನೇರ ನೇಮಕಾತಿ 2022

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 12, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 11, 2022

Chamarajanagara District Court Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment