Karnataka Apex Bank Recruitment 2022 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Apex Bank Recruitment 2022 : Details of Vacancies
ಹುದ್ದೆ : ಬ್ಯಾಂಕ್ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 79 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
(ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡ 60 ರಷ್ಟು ಅಂಕಗಳೊಂದಿಗೆ, ಪ.ಜಾತಿ/ ಪ.ಪಂ./ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 55 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಪದವಿ ಪರೀಕ್ಷೆಗಳಲ್ಲಿ ಒಟ್ಟು ಪಡೆದ ಅಂಕಗಳ ಶೇಕಡ ಪ್ರಮಾಣದ ಅರ್ಹತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡ 85ಕ್ಕೆ ಲೆಕ್ಕಾಚಾರ ಮಾಡಲಾಗುವುದು ಹಾಗೂ ಮೌಖಿಕ ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿ ಪಡಿಸಿದೆ.
ಉದ್ಯೋಗ ಮಾಹಿತಿ : Bagalkot DCC Bank Recruitment 2022
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,425 ರಿಂದ ರೂ. 87,125 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಪಾವತಿಸಬೇಕು
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 16, 2022
Karnataka Apex Bank Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.