WCD Raichur Anganwadi Recruitment 2022 – Apply Online for 41 Anganwadi Teacher And Helper Post

WCD Raichur Anganwadi Recruitment 2022 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Raichur Anganwadi Recruitment 2022 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ05
ಅಂಗನವಾಡಿ ಸಹಾಯಕಿ36

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.
• ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ಉತ್ತೀರ್ಣ, ಗರಿಷ್ಠ 9ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 9ನೇ ತರಗತಿ ಉತ್ತೀರ್ಣತೆ ಹೊಂದಿ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ 9ನೇ ತರಗತಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.

ಉದ್ಯೋಗ ಮಾಹಿತಿ : ಕೋಲಾರ ಹಾಗೂ ಯಾದಗಿರಿ ಜಿಲ್ಲೆಯ ಅಂಗನವಾಡಿ ಟೀಚರ್ ಹುದ್ದೆಗಳ ನೇರ ನೇಮಕಾತಿ 2022

ವಯೋಮಾನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ಕಾರ್ಯಕರ್ತೆ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :

  1. ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ದಾಖಲೆ.
  2. ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರ.
  3. ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಒಂದು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  4. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  5. ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 16, 2022

WCD Raichur Anganwadi Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಇತರೆ ಮಾಹಿತಿ : ಹುದ್ದೆ ಖಾಲಿಯಿರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹಾಗೂ ನಗರ ಪ್ರದೇಶದಲ್ಲಿ ಹುದ್ದೆ ಖಾಲಿಯಿರುವ ವಾರ್ಡಿನವರನ್ನು ಹೊರತುಪಡಿಸಿ ಬೇರೆ ವಾರ್ಡಿನವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment