Gadag District Court Recruitment 2022 : ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Gadag District Court Recruitment 2022 : Details of Vacancies
ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು | 01 | 27650-52650 |
ಬೆರಳಚ್ಚುಗಾರರು | 01 | 21400-42000 |
ಆದೇಶ ಜಾರಿಕಾರರು | 01 | 19950-37900 |
ಜವಾನ | 08 | 17000-28950 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಸೆಕ್ರೆಟರಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ಆದೇಶ ಜಾರಿಕಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. |
ಜವಾನ ಹುದ್ದೆಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು. |
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. |
ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. |
ಆದೇಶ ಜಾರಿಕಾರ, ಜವಾನ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. |
ಉದ್ಯೋಗ ಮಾಹಿತಿ : ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗದಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 100
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 05, 2022
Gadag District Court Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.