Bidar VA Recruitment 2022 – Apply Online for 57 Village Accountant Posts

Bidar VA Recruitment 2022 : ಬೀದರ್ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bidar VA Recruitment 2022 : Details of Vacancies

ಹುದ್ದೆ : ಗ್ರಾಮಲೆಕ್ಕಿಗರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 57 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಸ್ಥಳೀಯ ವೃಂದ (HK)46
ಸ್ಥಳಿಯೇತರ ವೃಂದ (Non HK)11

ಶೈಕ್ಷಣಿಕ ಅರ್ಹತೆ : ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (CBSE) ಅಥವಾ ಐ.ಸಿ.ಎಸ್.ಇ (ICSE) ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಇತರೆ ಯಾವುದೇ ತತ್ಸಮಾನ (JOC) ವಿದ್ಯಾರ್ಹತೆ ಅಥವಾ ತತ್ಸಮಾನ ಅಲ್ಲದೆ ಯಾವುದೇ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ. (ಗ್ರಾಮಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ 11/04/2022 ಕ್ಕೆ ಮುಂಚಿತವಾಗಿ ತೇರ್ಗಡೆ ಹೊಂದಿ ಮೂಲ ಅಂಕಪಟ್ಟಿಯನ್ನು ಪಡೆದುಕೊಂಡಿರತಕ್ಕದ್ದು)

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ದಿನಾಂಕ 01/01/2022 ವರೆಗೂ ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (On Merit) ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ 2022

ಬೀದರ್ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ಪ.ಪಂ/ಪ್ರ1/ಮಹಿಳಾ ಅಭ್ಯರ್ಥಿಗಳು ರೂ. 100
• ಇತರೆ ಅಭ್ಯರ್ಥಿಗಳು ರೂ. 200

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 16, 2022

Bidar VA Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment