Vijayapura Gram Panchayat Recruitment 2022 : ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Vijayapura Gram Panchayat Recruitment 2022 : Details of Vacancies
ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಾಂದಕವಟೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಪ್ರವರ್ಗ 2ಎ (ಮಹಿಳೆ) ಅಭ್ಯರ್ಥಿಗೆ ಮೀಸಲಿರಿಸಿದ 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಉದ್ಯೋಗ ಮಾಹಿತಿ : ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ವಿಜಯಪುರ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಮಾಹಿತಿ :
• ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
• ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು
• ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 07, 2022
Vijayapura Gram Panchayat Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.