Tumkur Zilla Panchayat Recruitment 2022 : Apply Online for 5 Assistants Posts

Tumkur Zilla Panchayat Recruitment 2022 : ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur Zilla Panchayat Recruitment 2022 : Details of Vacancies

ಹುದ್ದೆ : ಆಡಳಿತ ಸಹಾಯಕರು, ಲೆಕ್ಕ ಸಹಾಯಕರು, ಬಹುಸಹಾಯಕ ಕೆಲಸಗಾರ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಡಳಿತ ಸಹಾಯಕ01
ಲೆಕ್ಕ ಸಹಾಯಕ01
ಬಹುಸಹಾಯಕ ಕೆಲಸಗಾರ03

ಶೈಕ್ಷಣಿಕ ಅರ್ಹತೆ :

ಆಡಳಿತ ಸಹಾಯಕರು ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು. ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
ಲೆಕ್ಕ ಸಹಾಯಕ ಹುದ್ದೆಗೆ ಬಿ.ಕಾಂ. ಪದವಿ ಹೊಂದಿರಬೇಕು. ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಟ್ಯಾಲಿ ತಂತ್ರಾಂಶ ಬಳಸಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
ಬಹುಸಹಾಯಕ ಕೆಲಸಗಾರ ಹುದ್ದೆಗೆ ಕನಿಷ್ಠ 10ನೇ ತರಗತಿ ಪೂರ್ಣಗೊಂಡಿರಬೇಕು. ಕನಿಷ್ಠ 3 ವರ್ಷಗಳ ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದಿನಾಂಕ ಜೂನ್ 21, 2022 ಕ್ಕೆ 45 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಸರ್ಕಾರ ನಿಗದಿಪಡಿಸಿರುವ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
• ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 21, 2022

Tumkur Zilla Panchayat Recruitment 2022 : Important Links

NotificationClick Here
New Notification & Application FormClick Here
WebsiteClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment