RDWSD Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RDWSD Recruitment 2022 : Details of Vacancies
ಹುದ್ದೆ : ಜಿಲ್ಲಾ ಯೋಜನಾ ವ್ಯವಸ್ಥಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಮ್ಯಾನೇಜ್ಮೆಂಟ್/ಸೋಶಿಯಲ್ ಸೈನ್ಸ್/ಸೋಶಿಯಲ್ ವರ್ಕ್ /ಸಂಬಂಧಿತ ವೃತ್ತಿಪರ ಪದವಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವಯೋಮಾನ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ
ಅನುಭವ : ಅಭ್ಯರ್ಥಿಗಳು ಕನಿಷ್ಠ 8 ವರ್ಷ ಕೆಲಸದ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 14, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 21, 2022
RDWSD Recruitment 2022 : Important Links
Notification | Click Here |
Apply Online | Click Here |
ಇತರೆ ಮಾಹಿತಿ : ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.