Sirsi Urban Sahakari Bank Recruitment 2022 – Apply for 08 Branch Manager/Accountant/Law Officer/Manager (IT) Posts

Sirsi Urban Sahakari Bank Recruitment 2022 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Sirsi Urban Sahakari Bank Recruitment 2022 : Details of Vacancies

ಹುದ್ದೆ : ವ್ಯವಸ್ಥಾಪಕ/ ಲೆಕ್ಕಿಗ/ ಕಾಯ್ದೆ ಅಧಿಕಾರಿ/ವ್ಯವಸ್ಥಾಪಕರು (ಮಾಹಿತಿ ತಂತ್ರಜ್ಞಾನ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಇ/ ಬಿ.ಎಸ್ಸಿ/ಬಿ.ಎ ಪದವಿಯಲ್ಲಿ ಕಡ್ಡಾಯವಾಗಿ ಶೇಕಡಾ 60 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಉದ್ಯೋಗ ಮಾಹಿತಿ : ಕೆನರಾ ಡಿಸಿಸಿ ಬ್ಯಾಂಕ್ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650 ರಿಂದ ರೂ. 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟಿನಲ್ಲಿ ಗ್ರೂಪ್ ಡಿ ಹುದ್ದೆಗಳ ನೇರ ನೇಮಕಾತಿ 2022

ಆಯ್ಕೆ ವಿಧಾನ : ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಶೇಕಡಾ 85ಕ್ಕೆ ನಿಗದಿಪಡಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುವುದು.

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ, ಅಗತ್ಯ ಸ್ವದೃಢೀಕೃತ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು,
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)

ನಿಗದಿತ ಅರ್ಜಿ ಶುಲ್ಕದ ವಿವರ : ರೂ. 500 ಅರ್ಜಿ ಶುಲ್ಕವನ್ನು “ಪ್ರಧಾನ ವ್ಯವಸ್ಥಾಪಕರು, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 06, 2022

Sirsi Urban Sahakari Bank Recruitment 2022 : Important Links

NotificationClick Here
Application Form Click Here
Websitewww.sirsiurbanbank.in

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment