Karnataka Forest Department Recruitment 2022 : ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ವಲಯ ಅರಣ್ಯಾಧಿಕಾರಿ (RFO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Forest Department Recruitment 2022 : Details of Vacancies
ಹುದ್ದೆ : ವಲಯ ಅರಣ್ಯಾಧಿಕಾರಿ (RFO)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ | ಹುದ್ದೆಗಳ ಸಂಖ್ಯೆ |
ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವೀಧರರಿಗೆ | 5 |
ಬಿ.ಎಸ್ಸಿ (ವಿಜ್ಞಾನ)/ ನಿಗದಿತ ಇಂಜಿನಿಯರಿಂಗ್ ಪದವೀಧರರಿಗೆ | 5 |
ಶೈಕ್ಷಣಿಕ ಅರ್ಹತೆ : (ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ಗರಿಷ್ಠ ಅಂಕಗಳಿಗೆ ಕನಿಷ್ಠ ಶೇಕಡ 50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು)
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಅರಣ್ಯ ಶಾಸ್ತ್ರ ವಿಷಯದಲ್ಲಿ ಪದವೀಧರರಾಗಿರಬೇಕು. ಅಥವಾ |
ಅಂಗೀಕೃತ ವಿಶ್ವವಿದ್ಯಾಲಯದಿಂದ ಈ ಕೆಳಕಂಡ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಒಳಗೊಂಡಂತೆ ಬಿ.ಎಸ್ಸಿ ಪದವೀಧರರಾಗಿರಬೇಕು (ಕೃಷಿ, ಅರಣ್ಯ ಶಾಸ್ತ್ರ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಜ್ಞಾನ, ಮೀನುಗಾರಿಕೆ, ವನ್ಯಜೀವಿ, ಪರಿಸರ ವಿಜ್ಞಾನ, ರಸಾಯನ ಶಾಸ್ತ್ರ, ಭೂ ವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಅಪ್ಲಿಕೇಷನ್) ಅಥವಾ |
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಈ ಕೆಳಕಂಡ ಇಂಜಿನಿಯರಿಂಗ್/ ಟೆಕ್ನಾಲಜಿ ಪದವೀಧರರಾಗಿರಬೇಕು (ಕೃಷಿ, ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್) |
ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ’ಸಿ’ ಹುದ್ದೆಗಳ ನೇಮಕಾತಿ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
• ಸಾಮಾನ್ಯ ಅರ್ಹತೆ – ಗರಿಷ್ಠ 28 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 33 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 31 ವರ್ಷ
ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗದಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:10ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯಸಮರ್ಥತೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200+20(ಸೇವಾ ಶುಲ್ಕ)
• ಎಸ್ಸಿ, ಎಸ್ಟಿ, ಪ್ರ 1 ಅಭ್ಯರ್ಥಿಗಳು – ರೂ. 100+20(ಸೇವಾ ಶುಲ್ಕ)
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 23, 2022
Karnataka Forest Department Recruitment 2022 : Important Links
Notification | Click Here |
Apply Online | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.