GESCOM Recruitment 2022 : ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
GESCOM Recruitment 2022 : Details of Vacancies
ಹುದ್ದೆ : ಗ್ರ್ಯಾಜುಯೆಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 135 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಗ್ರ್ಯಾಜುಯೆಟ್ ಅಪ್ರೆಂಟಿಸ್ | 100 |
ಡಿಪ್ಲೋಮಾ ಅಪ್ರೆಂಟಿಸ್ | 35 |
ಶೈಕ್ಷಣಿಕ ಅರ್ಹತೆ :
• ಗ್ರ್ಯಾಜುಯೆಟ್ ಅಪ್ರೆಂಟಿಸ್ – ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಪದವಿ ಪಡೆದಿರಬೇಕು.
• ಡಿಪ್ಲೋಮಾ ಅಪ್ರೆಂಟಿಸ್ – ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಸರ್ಟಿಫಿಕೇಟ್ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷಕ್ಕಿಂತ ಕಡಿಮೆ ಇರಬಾರದು.
ವೇತನ : ತರಬೇತಿ ಅವಧಿಯಲ್ಲಿ ಮಾಸಿಕ ರೂ. 9000 (ಇಂಜಿನಿಯರ್ ಪದವೀಧರರು) ಹಾಗೂ ರೂ. 8000 (ಡಿಪ್ಲೋಮಾ ಇಂಜಿನಿಯರಿಂಗ್) ವೇತನ ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು : 2020, 2021, 2022ರ ಇಸವಿಯಲ್ಲಿ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಇಂಜಿನಿಯರಿಂಗ್ ಪಾಸಾಗಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆ ವಿಧಾನ : ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ), ನಿಗಮ ಕಛೇರಿ, ಗು.ವಿ.ಸ.ಕಂ.ನಿ, (ಜೆಸ್ಕಾಂ) ಕಲಬುರಗಿ – 585102
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 08, 2022
GESCOM Recruitment 2022 : Important Links
NOTIFICATION & APPLICATION FORM | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.