IBPS RRB Recruitment 2023 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಗ್ರಾಮೀಣ ಬ್ಯಾಂಕುಗಳಲ್ಲಿ ಅಗತ್ಯವಿರುವ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IBPS RRB Recruitment 2023 : Details of Vacancies
ಹುದ್ದೆ : ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್), ಆಫೀಸರ್ ಸ್ಕೇಲ್ 1 (ಅಸಿಸ್ಟೆಂಟ್ ಮ್ಯಾನೇಜರ್), ಆಫೀಸರ್ ಸ್ಕೇಲ್ 2 ಜನರಲ್ ಬ್ಯಾಂಕಿಂಗ್ ಆಫೀಸರ್ (ಮ್ಯಾನೇಜರ್), ಆಫೀಸರ್ ಸ್ಕೇಲ್ 2 ಸ್ಪೆಷಲಿಸ್ಟ್ ಆಫೀಸರ್ಸ್ (ಮ್ಯಾನೇಜರ್) (ಐಟಿ ಆಫೀಸರ್, ಚಾರ್ಟರ್ಡ್ ಅಕೌಂಟೆಂಟ್, ಕಾನೂನು ಆಫೀಸರ್, ಟ್ರೆಜರಿ ಆಫೀಸರ್, ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಆಫೀಸರ್), ಆಫೀಸರ್ ಸ್ಕೇಲ್ 3 (ಸೀನಿಯರ್ ಮ್ಯಾನೇಜರ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಗ್ರಾಮೀಣ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 8612 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಆಫೀಸರ್ ಸ್ಕೇಲ್ 1 (ಅಸಿಸ್ಟೆಂಟ್ ಮ್ಯಾನೇಜರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಆಫೀಸರ್ ಸ್ಕೇಲ್ 2 ಜನರಲ್ ಬ್ಯಾಂಕಿಂಗ್ ಆಫೀಸರ್ (ಮ್ಯಾನೇಜರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿಯಲ್ಲಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಯಲ್ಲಿ 2 ವರ್ಷ ಆಫೀಸರ್ ಆಗಿ ಅನುಭವ ಹೊಂದಿರಬೇಕು.
• ಆಫೀಸರ್ ಸ್ಕೇಲ್ 2 ಸ್ಪೆಷಲಿಸ್ಟ್ ಆಫೀಸರ್ಸ್ (ಮ್ಯಾನೇಜರ್)
ಐಟಿ ಆಫೀಸರ್ – ಇಲೆಕ್ಟ್ರಾನಿಕ್ಸ್/ ಕಮ್ಯುನಿಕೇಷನ್/ ಕಂಪ್ಯೂಟರ್ ಸೈನ್ಸ್/ ಐಟಿ ವಿಷಯದಲ್ಲಿ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. 1 ವರ್ಷದ ಅನುಭವ ಹೊಂದಿರಬೇಕು.
ಚಾರ್ಟರ್ಡ್ ಅಕೌಂಟೆಂಟ್ – ಸಿಎ ಅರ್ಹತೆ ಹೊಂದಿರಬೇಕು. ಸಿಎ ಆಗಿ 1 ವರ್ಷದ ಅನುಭವ ಹೊಂದಿರಬೇಕು.
ಕಾನೂನು ಆಫೀಸರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಕಾನೂನು ಪದವಿ ಹೊಂದಿರಬೇಕು. 2 ವರ್ಷ ಅನುಭವ ಹೊಂದಿರಬೇಕು.
ಟ್ರೆಜರಿ ಆಫೀಸರ್ – ಸಿಎ ಅಥವಾ ಎಂಬಿಎ ಫೈನಾನ್ಸ್ ಅರ್ಹತೆ ಹೊಂದಿರಬೇಕು. 1 ವರ್ಷದ ಅನುಭವ ಹೊಂದಿರಬೇಕು.
ಮಾರ್ಕೆಟಿಂಗ್ ಆಫೀಸರ್ – ಎಂಬಿಎ ಮಾರ್ಕೆಟಿಂಗ್ ಅರ್ಹತೆ ಹೊಂದಿರಬೇಕು. 1 ವರ್ಷದ ಅನುಭವ ಹೊಂದಿರಬೇಕು.
ಅಗ್ರಿಕಲ್ಚರ್ ಆಫೀಸರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಅಗ್ರಿಕಲ್ಚರ್/ ಹೊರ್ಟಿಕಲ್ಚರ್/ ಡೈರಿ/ ಅನಿಮಲ್ ಹಸ್ಬಂಡರಿ/ ಫಾರೆಸ್ಟ್ರಿ/ ವೆಟರ್ನರಿ ಸೈನ್ಸ್/ ಅಗ್ರಿಕಲ್ಚರಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಅರ್ಹತೆ ಹೊಂದಿರಬೇಕು. 2 ವರ್ಷಗಳ ಅನುಭವ ಹೊಂದಿರಬೇಕು.
• ಆಫೀಸರ್ ಸ್ಕೇಲ್ 3 (ಸೀನಿಯರ್ ಮ್ಯಾನೇಜರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿಯಲ್ಲಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಭಾರತೀಯ ಅಂಚೆ ಇಲಾಖೆ ನೇಮಕಾತಿ 2023
ವಯೋಮಾನ : ದಿನಾಂಕ 01/06/2023ಕ್ಕೆ
ಹುದ್ದೆ | ವಯೋಮಾನ |
ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) | 18-28 |
ಆಫೀಸರ್ ಸ್ಕೇಲ್ 1 | 18-30 |
ಆಫೀಸರ್ ಸ್ಕೇಲ್ 2 | 21-32 |
ಆಫೀಸರ್ ಸ್ಕೇಲ್ 3 | 21-40 |
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 21, 2023 ಜೂನ್ 28, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 21, 2023 ಜೂನ್ 28, 2023
IBPS RRB Recruitment 2023 : Important Links
Date Extension Notification | Click Here |
NOTIFICATION | CLICK HERE |
APPLY ONLINE – Office Assistant (Multipurpose) | CLICK HERE |
APPLY ONLINE – Officer Scale I | CLICK HERE |
APPLY ONLINE – Officer Scale II & III | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.