ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2023 – WCD Belagavi Anganwadi Recruitment 2023

WCD Belagavi Anganwadi Recruitment 2023 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಯ 8 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Belagavi Anganwadi Recruitment 2023 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 676 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ200
ಅಂಗನವಾಡಿ ಸಹಾಯಕಿ476

ಕರ್ತವ್ಯ ಸ್ಥಳ : ಬೆಳಗಾವಿ ಜಿಲ್ಲೆಯ ಅರಭಾವಿ, ಗೋಕಾಕ್, ಬೈಲಹೊಂಗಲ, ಕಾಗವಾಡ, ಚಿಕ್ಕೋಡಿ, ರಾಯಭಾಗ, ಅಥಣಿ ಹಾಗೂ ಖಾನಾಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರು – ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿಯರು – ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಬೆಳಗಾವಿ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು. (ಹೆಚ್ಚಿನ ಮಾಹಿತಿ ಪ್ರಕಟಣೆಯಲ್ಲಿ ನೀಡಲಾಗಿದೆ)

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 12, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 16, 2023

WCD Belagavi Anganwadi Recruitment 2023 : Important Links

ಪ್ರಕಟಣೆCLICK HERE
Telegram Join Link Click Here

ಇತರೆ ಮಾಹಿತಿ : ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. (ಆಯಾ ಕಛೇರಿಯ ದೂರವಾಣಿ ಸಂಖ್ಯೆ ಪ್ರಕಟಣೆಯಲ್ಲಿ ನೀಡಲಾಗಿದೆ)

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment