ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ 2023 – DWDSC Karnataka Recruitment 2023

DWDSC Karnataka Recruitment 2023 : ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (UDID) ನೀಡುವ ಯೋಜನೆಯನ್ನು ಅನುಷ್ಟಾನ ಗೊಳಿಸುತ್ತಿದ್ದು, ಈ ಯೋಜನೆಯ ಉಸ್ತುವಾರಿಗೆ ರಾಜ್ಯ ಸಂಯೋಜಕರ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DWDSC Karnataka Recruitment 2023 : Details of Vacancies

ಹುದ್ದೆ : ರಾಜ್ಯ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಂಪ್ಯೂಟರ್ ಸೈನ್ಸ್/ ಐಟಿ ಯಲ್ಲಿ ಡಿಪ್ಲೊಮಾ ಅರ್ಹತೆ ಹೊಂದಿರಬೇಕು ಅಥವಾ ಕಂಪ್ಯೂಟರ್ ಎಜ್ಯುಕೇಶನ್ ನಲ್ಲಿ ಪದವಿ ಪಡೆದಿರಬೇಕು.

ಉದ್ಯೋಗ ಮಾಹಿತಿ : ಎಸ್.ಡಿ.ಎ, ಎಫ್.ಡಿ.ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 (ಎಲ್ಲಾ ಭತ್ಯೆಗಳು ಸೇರಿದಂತೆ) ಸಂಭಾವನೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ತಮ್ಮ ಬಯೋಡೇಟಾ ವನ್ನು ಸಿದ್ಧಪಡಿಸಿಕೊಳ್ಳಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಹುದ್ದೆಗೆ ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು. (ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು)

ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ, ಪೋಡಿಯಂ ಬ್ಲಾಕ್, ವಿ.ವಿ.ಗೋಪುರ, ಡಾ|| ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 11, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 24, 2023

DWDSC Karnataka Recruitment 2023 : Important Links

NOTIFICATIONCLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ, ಪೋಡಿಯಂ ಬ್ಲಾಕ್, ವಿ.ವಿ.ಗೋಪುರ, ಡಾ||ಎ ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು -560001 ಇವರನ್ನು ದೂರವಾಣಿ ಸಂಖ್ಯೆ : 080-22866066, 22860907 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment