India Post New Recruitment 2023 : ಭಾರತೀಯ ಅಂಚೆ ಇಲಾಖೆಯಿಂದ ಬೆಂಗಳೂರಿನಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
India Post New Recruitment 2023 : Details of Vacancies
ಹುದ್ದೆ : ಸ್ಕಿಲ್ಲ್ಡ್ ಅರ್ಟಿಸನ್ಸ್ (ಮೋಟಾರ್ ವೆಹಿಕಲ್ ಮೆಕ್ಯಾನಿಕ್, ಮೋಟಾರ್ ವೆಹಿಕಲ್ ಇಲೆಕ್ಟ್ರಿಷಿಯನ್, ಪೇಂಟರ್, ಟೈರ್ಮನ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಟ್ರೇಡ್ | ಹುದ್ದೆಗಳ ಸಂಖ್ಯೆ |
ಮೋಟಾರ್ ವೆಹಿಕಲ್ ಮೆಕ್ಯಾನಿಕ್ | 2 |
ಮೋಟಾರ್ ವೆಹಿಕಲ್ ಇಲೆಕ್ಟ್ರಿಷಿಯನ್ | 1 |
ಪೇಂಟರ್ | 1 |
ಟೈರ್ ಮನ್ | 1 |
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಆಯಾ ಟ್ರೇಡ್ ಗಳಲ್ಲಿ ಪ್ರಮಾಣಪತ್ರ ಪಡೆದಿರಬೇಕು ಅಥವಾ ಎಂಟನೇ ತರಗತಿ ಉತ್ತೀರ್ಣತೆ ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. (ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಹುದ್ದೆಗೆ ವಾಹನ ಚಾಲನಾ ಪರವಾನಿಗೆ (HMV) ಹೊಂದಿರಬೇಕು).
ವಯೋಮಿತಿ : ದಿನಾಂಕ 01 ಜುಲೈ 2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಉದ್ಯೋಗ ಮಾಹಿತಿ : ಹುಬ್ಬಳ್ಳಿ, ಬೆಂಗಳೂರು ರೈಲ್ವೆ ನೇಮಕಾತಿ 2023
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ರಿಂದ ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳ ಅರ್ಹತೆಯ ಆಧಾರದ ಮೇಲೆ ಟ್ರೇಡ್ ಟೆಸ್ಟ್ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರೆಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ.4, ಬಸವೇಶ್ವರ ರಸ್ತೆ, ವಸಂತ ನಗರ, ಬೆಂಗಳೂರು -560001
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 15, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 05, 2023
India Post New Recruitment 2023 : Important Links
NOTIFICATION & APPLICATION FORM | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.