ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2023 – SSC Stenographer Recruitment 2023 Apply Online at ssc.nic.in

SSC Stenographer Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Stenographer Recruitment 2023 : Details of Vacancies

ಹುದ್ದೆ : ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1207 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಸ್ಟೆನೋಗ್ರಾಫರ್ ಗ್ರೇಡ್ ‘ಸಿ’93
ಸ್ಟೆನೋಗ್ರಾಫರ್ ಗ್ರೇಡ್ ‘ಡಿ’1114

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ : ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗಳಿಗೆ – ಗರಿಷ್ಠ 30 ವರ್ಷ
• ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ – ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ 2023

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 02, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 23, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಅಕ್ಟೋಬರ್, 2023

SSC Stenographer Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link CLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment