ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023 – Sri Lakshminarayana Cooperative Bank Recruitment 2023

Sri Lakshminarayana Cooperative Bank Recruitment 2023 : ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Sri Lakshminarayana Cooperative Bank Recruitment 2023 : Details of Vacancies

ಹುದ್ದೆ : ಕಂಪ್ಯೂಟರ್ ಪ್ರೋಗ್ರಾಮರ್, ಅಟೆಂಡರ್/ಡ್ರೈವರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಂಪ್ಯೂಟರ್ ಪ್ರೋಗ್ರಾಮರ್1
ಅಟೆಂಡರ್/ಡ್ರೈವರ್2

ಶೈಕ್ಷಣಿಕ ಅರ್ಹತೆ :
ಕಂಪ್ಯೂಟರ್ ಪ್ರೋಗ್ರಾಮರ್ – ಕರ್ನಾಟಕ ರಾಜ್ಯದ ಯಾವುದೇ ಅಂಗೀಕೃತ ವಿದ್ಯಾಲಯದಲ್ಲಿ ಬಿ.ಎಸ್ಸಿ, ಬಿಸಿಎ ಅಥವಾ ಬಿ.ಕಾಂ ಪದವಿಯಲ್ಲಿ ಶೇಕಡಾ 60 ಹಾಗೂ ಹೆಚ್ಚು ಅಂಕಗಳಿಸಿರಬೇಕು. ಕಂಪ್ಯೂಟರ್ ಅಪ್ಲಿಕೇಷನ್, ಪ್ರೋಗ್ರಾಮಿಂಗ್ ಹಾಗೂ ನೆಟ್ವರ್ಕಿಂಗ್ ಬಗ್ಗೆ ಪರಿಜ್ಞಾನ ಇರುವವರಿಗೆ ಆದ್ಯತೆ.

ಅಟೆಂಡರ್/ ಡ್ರೈವರ್ – ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಮೆಸ್ಕಾಂ ನೇಮಕಾತಿ 2023

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರ ಹೆಸರಿಗೆ ರೂ. 1000 ಡಿ.ಡಿ ಪಡೆದು ಅರ್ಜಿಯ ಜೊತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ಕಛೇರಿ, ನಂ. 1627/2 ಪಾರ್ಕ್ ರಸ್ತೆ, ರಾಮಮೋಹನಪುರ, ಬೆಂಗಳೂರು – 21

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2023

Sri Lakshminarayana Cooperative Bank Recruitment 2023 : Important Links

NOTIFICATIONCLICK HERE
Telegram Join Link Click Here

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment