HESCOM Recruitment 2023 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
HESCOM Recruitment 2023 : Details of Vacancies
ಹುದ್ದೆ : ಐಟಿಐ ಅಪ್ರೆಂಟಿಸ್ (ಇಲೆಕ್ಟ್ರೀಷಿಯನ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 248 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಎರಡು ವರ್ಷದ ಐ.ಟಿ.ಐ (ಇಲೆಕ್ಟ್ರೀಶಿಯನ್) ವೃತ್ತಿಯಲ್ಲಿ ಉತ್ತೀರ್ಣರಾಗಿ NCVT/SCVT-PROVISIONAL NATIONAL TRADE CERTIFICATE ಅಂಕ ಪಟ್ಟಿಯನ್ನು ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಉದ್ಯೋಗ ಮಾಹಿತಿ : ಕೆಎಂಎಫ್ ನೇಮಕಾತಿ 2023
ವಯೋಮಾನ : ದಿನಾಂಕ 26-08-2023ಕ್ಕೆ
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
• ಉಳಿದ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ
ಶಿಶಿಕ್ಷು ವೇತನ : ಅಭ್ಯರ್ಥಿಗಳಿಗೆ ಮಾಸಿಕ ರೂ. 7,000 ಶಿಶಿಕ್ಷು ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಹಾರ್ಡ್ ಪ್ರತಿಯನ್ನು ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಅಧಿಸೂಚನೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳು – ರೂ. 100
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು – ರೂ. 50
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ನಿಗದಿತ ಶುಲ್ಕದ ಪೊಸ್ಟಲ್ ಆರ್ಡರನ್ನು “ಆರ್ಥಿಕ ಸಲಹೆಗಾರರು, ಹುವಿಸಕಂನಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಅಭಿಯಂತರರು(ವಿ), ಕೈಗಾರಿಕಾ ತರಬೇತಿ ಕೇಂದ್ರ, (ITC), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ವಿದ್ಯುತ್ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-580024
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2023
ಹಾರ್ಡಪ್ರತಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 16, 2023
HESCOM Recruitment 2023 : Important Links
NOTIFICATION & APPLICATION FORM | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.