Karnataka Forest Department Recruitment 2023 : ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಪೂರ್ತಿ ಓದಿ.
Karnataka Forest Department KFD Recruitment 2023 : Details of Vacancies
ಹುದ್ದೆ : ಅರಣ್ಯ ವೀಕ್ಷಕ (Forest Watcher)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೃತ್ತ | ಹುದ್ದೆಗಳ ಸಂಖ್ಯೆ |
ಬೆಂಗಳೂರು | 33 |
ಬೆಳಗಾವಿ | 20 |
ಬಳ್ಳಾರಿ | 20 |
ಚಾಮರಾಜನಗರ | 32 |
ಚಿಕ್ಕಮಗಳೂರು | 25 |
ಧಾರವಾಡ | 7 |
ಹಾಸನ | 20 |
ಕೆನರಾ | 32 |
ಕೊಡಗು | 16 |
ಕಲಬುರ್ಗಿ | 23 |
ಮಂಗಳೂರು | 20 |
ಮೈಸೂರು | 32 |
ಶಿವಮೊಗ್ಗ | 30 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಾನ : ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 32 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600 ರಿಂದ ರೂ. 32,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. (ಲಿಖಿತ ಪರೀಕ್ಷೆ ಇರುವುದಿಲ್ಲ)
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 220
• ಪ.ಜಾತಿ, ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳು – ರೂ. 120
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಭಾರತೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 27, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 26, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2023
KFD Forest Watcher Recruitment 2023 : Important Links
SHORT NOTIFICATION | CLICK HERE |
NOTIFICATION (Shivamogga) | CLICK HERE |
NOTIFICATION (Belagavi, Dharwad) | CLICK HERE |
NOTIFICATION (Kodagu) | CLICK HERE |
APPLY ONLINE | CLICK HERE |
Telegram Join Link | CLICK HERE |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.