ಬೆಸ್ಕಾಂ ನೇಮಕಾತಿ 2023 – BESCOM Apprentice Recruitment 2023

BESCOM Apprentice Recruitment 2023 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯಕ್ಕೆ ಸೇರಿದ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ (ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೊಮಾ ಹೊಂದಿರುವವರು) ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BESCOM Apprentice Recruitment 2023 : Details of Vacancies

ಹುದ್ದೆ : ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ಪದವೀಧರ ಅಪ್ರೆಂಟಿಸ್3259000
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್758000

ಶೈಕ್ಷಣಿಕ ಅರ್ಹತೆ :
ಪದವೀಧರ ಅಪ್ರೆಂಟಿಸ್ – ಬಿ.ಇ/ ಬಿ.ಟೆಕ್ ಪದವಿಯನ್ನು ಪಡೆದಿರಬೇಕು.
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೋಮಾವನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ತರಬೇತಿ ಅವಧಿ : ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ವಯೋಮಿತಿ : ಅಪ್ರೆಂಟಿಸ್ ನಿಯಮದ ಪ್ರಕಾರ ವಯಸ್ಸಿನ ಮೀತಿ 18 ವರ್ಷಕ್ಕಿಂತ ಕಡಿಮೆ ಇರಬಾರದು.

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ದಾಖಲೆಗಳ ಪರಿಶೀಲನೆ ವಿಳಾಸ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಹೆಚ್.ಆರ್.ಡಿ. ಸೆಂಟರ್, 1ನೇ ಮಹಡಿ, ಕ್ರೆಸೆಂಟ್ ಟವರ್ಸ್, ಕ್ರೆಸೆಂಟ್ ರಸ್ತೆ, ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್ ಕೋರ್ಸ್, ಬೆಂಗಳೂರು – 560001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 11, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 31, 2023
ಕಿರುಪಟ್ಟಿಯಾದ ಅಭ್ಯರ್ಥಿಗಳ ಪಟ್ಟಿಯ ಘೋಷಣೆ : ಜನವರಿ 08, 2024
ದಾಖಲೆಗಳ ಪರಿಶೀಲನೆ ದಿನಾಂಕ : ಜನವರಿ 22, 2024 ರಿಂದ ಜನವರಿ 24, 2024

BESCOM Apprenticeship 2023 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಅಭ್ಯರ್ಥಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಗಳಿಸಿ ಪದವಿ/ ಡಿಪ್ಲೋಮಾವನ್ನು ಫೆಬ್ರವರಿ-2019 ಹಾಗೂ ಅದರ ನಂತರ 2020, 2021, 2022 ಮತ್ತು ಅಕ್ಟೋಬರ್ 2023ರ ಅವಧಿಯಲ್ಲಿ ಪಡೆದಿರಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment