ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ 2024 – Uttara Kannada District Home Guards Recruitment 2024

Uttara Kannada District Home Guards Recruitment 2024 : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Home Guards Recruitment 2024 : Details of Vacancies

ಹುದ್ದೆ : ಗೃಹರಕ್ಷಕ/ಗೃಹರಕ್ಷಕಿಯರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಚೆಂಡಿಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ಧಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ, ಉಪಘಟಕಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 202 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ಇತರೆ ಅರ್ಹತೆ :
• ಪುರುಷ ಅಭ್ಯರ್ಥಿಗಳ ಎತ್ತರ – 163 ಸೆ.ಮೀ
• ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆ.ಮೀ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 28, 2024

Uttara Kannada District Home Guards Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment