ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿ 2024 – BSF Recruitment 2024

BSF Recruitment 2024 : ಗಡಿ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BSF Recruitment 2024 : Details of Vacancies

ಹುದ್ದೆ : ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1526 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)24329200-92300
ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್)128325500-81100

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ಮೀಡಿಯೇಟ್/ ಸೀನಿಯರ್ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ (10+2) ವಿದ್ಯಾರ್ಹತೆಯನ್ನು ಹೊಂದಿರಬೇಕು. ಟೈಪಿಂಗ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಐಬಿಪಿಎಸ್ ನಿಂದ ಗ್ರಾಮೀಣ ಬ್ಯಾಂಕುಗಳಲ್ಲಿ ಬೃಹತ್ ನೇಮಕಾತಿ 2024

ವಯೋಮಾನ : ದಿನಾಂಕ 01/08/2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ (PST), ಸಹಿಷ್ಣುತೆ ಪರೀಕ್ಷೆ (PET), ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ , ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 09, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 08, 2024

BSF Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment