SSC CGL Recruitment 2024 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC CGL Recruitment 2024 : Details of Vacancies
ಹುದ್ದೆ : ಗ್ರೂಪ್-ಬಿ ಮತ್ತು ಗ್ರೂಪ್-ಸಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 17727 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 1,42,400 ರವರೆಗೂ ವೇತನ ನೀಡಲಾಗುತ್ತದೆ.
ವಯೋಮಿತಿ : ದಿನಾಂಕ 01-08-2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಗ್ರೂಪ್ ‘ಬಿ’ – ಗರಿಷ್ಠ 30 ವರ್ಷ
• ಗ್ರೂಪ್ ‘ಸಿ’ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1, ಪೇಪರ್-2), ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಮಹಾನಗರ ಪಾಲಿಕೆಗಳಲ್ಲಿ SDA ಹುದ್ದೆಗಳ ನೇಮಕಾತಿ 2024
ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 24, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 24, 2024
ಆನ್ಲೈನ್ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಸೆಪ್ಟೆಂಬರ್-ಅಕ್ಟೋಬರ್, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಡಿಸೆಂಬರ್, 2024
SSC CGL Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.