KPSC Animal Husbandry and Fisheries Department Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPSC Animal Husbandry and Fisheries Department Recruitment 2024 : Details of Vacancies
ಹುದ್ದೆ : ಪಶು ವೈದ್ಯಾಧಿಕಾರಿಗಳು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ & ಎಹೆಚ್ ಪದವಿ ಪಡೆದಿರಬೇಕು. ಕೆವಿಸಿ/ಐವಿಸಿ ನಲ್ಲಿ ನೋಂದಣಿಯಾಗಿರಬೇಕು.
ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650 ರಿಂದ ರೂ. 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 12, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 12, 2024
KPSC Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.