ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ 2024 – KSHRC Karnataka Recruitment 2024

KSHRC Karnataka Recruitment 2024 : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSHRC Karnataka Recruitment 2024 : Details of Vacancies

ಹುದ್ದೆ : ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು, ವಾಹನ ಚಾಲಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು233,450
ವಾಹನ ಚಾಲಕರು121,400

ಶೈಕ್ಷಣಿಕ ಅರ್ಹತೆ :
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು –
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದವರಾಗಿರಬೇಕು. ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ವಾಹನ ಚಾಲಕರು – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಾಗಿರಬೇಕು. ಪ್ರಸ್ತುತ ಮಾನ್ಯತೆ ಪಡೆದ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಜ್ಞಾನ ಉಳ್ಳವರಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024

ಆಯ್ಕೆ ವಿಧಾನ : ಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬಹುದು ಅಥವಾ ಅರ್ಜಿ ಮತ್ತು ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒಂದೇ ಫೈಲ್ ನಲ್ಲಿ ಸ್ಕ್ಯಾನ್ ಮಾಡಿ, ಪಿಡಿಎಫ್ ಫಾರ್ಮೆಟ್ ನಲ್ಲಿ ಈ ಕೆಳಗೆ ನೀಡಲಾದ ಕಚೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, 5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001
ಇ-ಮೇಲ್ ವಿಳಾಸ : secretary-kshrc@karnataka.gov.in

ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 13, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2024

KSHRC Recruitment 2024 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment