DWCD Yadgiri Recruitment 2024 : ಯಾದಗಿರಿ ಜಿಲ್ಲೆಯಲ್ಲಿ ಒನ್ ಸ್ಟಾಪ್ ಸೆಂಟರ್ (ಸಖಿ) ಯೋಜನೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಕೇಂದ್ರ ನಿರ್ವಾಹಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DWCD Yadgiri Recruitment 2024 : Details of Vacancies
ಹುದ್ದೆ : ಕೇಂದ್ರ ನಿರ್ವಾಹಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂ.ಎಸ್.ಡಬ್ಲ್ಯೂ/ ಮಾಸ್ಟರ್ಸ್ ಇನ್ ಲಾ/ ಎಂ.ಎಸ್ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವಲಪ್ಮೆಂಟ್ & ಫ್ಯಾಮಿಲಿ ರಿಲೆಷನ್)/ ಎಂ.ಎಸ್ಸಿ ಸೈಕಾಲಜಿ/ ಎಂ.ಎಸ್ಸಿ ಸೈಕಿಯಾಟ್ರಿ (5 ವರ್ಷದ ಅನುಭವ)
ಉದ್ಯೋಗ ಮಾಹಿತಿ : ಚಿಕ್ಕಬಳ್ಳಾಪುರ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಗಣಕಯಂತ್ರ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಅನುಭವ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಲು ಸೂಚಿಸಿದೆ.
ಅರ್ಜಿ ಸಲ್ಲಿಸುವ ವಿಳಾಸ : ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 17, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2024
DWCD Yadgiri Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಸಲ್ಲಿಸಬೇಕಾದ ದಾಖಲೆಗಳು :
• ನಿಗದಿತ ನಮೂನೆಯಲ್ಲಿ ಅರ್ಜಿ
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
• ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.