ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ 2024 – Mandya Zilla Panchayat Recruitment 2024

Mandya Zilla Panchayat Recruitment 2024 : ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರು ಹಾಗೂ ಆಡಳಿತ ಸಹಾಯಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mandya Zilla Panchayat Recruitment 2024 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ರೇಷ್ಮೆ), ತಾಂತ್ರಿಕ ಸಹಾಯಕರು (ಕೃಷಿ), ಆಡಳಿತ ಸಹಾಯಕರು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ತಾಂತ್ರಿಕ ಸಹಾಯಕರು (ಸಿವಿಲ್)128,000+2,000
ತಾಂತ್ರಿಕ ಸಹಾಯಕರು (ಅರಣ್ಯ)328,000+2,000
ತಾಂತ್ರಿಕ ಸಹಾಯಕರು (ತೋಟಗಾರಿಕೆ)428,000+2,000
ತಾಂತ್ರಿಕ ಸಹಾಯಕರು (ರೇಷ್ಮೆ)228,000+2,000
ತಾಂತ್ರಿಕ ಸಹಾಯಕರು (ಕೃಷಿ)528,000+2,000
ಆಡಳಿತ ಸಹಾಯಕರು422,000

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ/ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್.
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್)
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್)
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್)
• ಆಡಳಿತ ಸಹಾಯಕರು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : KPSC ಇಂದ ಲೋಕೋಪಯೋಗಿ ಇಲಾಖೆಯಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ : ದಿನಾಂಕ 31/07/2024ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು.
• ತಾಂತ್ರಿಕ ಸಹಾಯಕರು (ಸಿವಿಲ್) – ಗರಿಷ್ಠ 45 ವರ್ಷ
• ತಾಂತ್ರಿಕ ಸಹಾಯಕರು (ಉಳಿದ ಹುದ್ದೆಗಳಿಗೆ) – ಗರಿಷ್ಠ 40 ವರ್ಷ
• ಆಡಳಿತ ಸಹಾಯಕರು – ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ, ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.

ಅನುಭವ (ಅಪೇಕ್ಷಣೀಯ) : ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಇದ್ದಲ್ಲಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 01, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 20, 2024

Mandya ZP Recruitment 2024 : Important Links

NOTIFICATIONCLICK HERE
TECHNICAL ASSISTANT (CIVIL) – APPLY ONLINECLICK HERE
TECHNICAL ASSISTANT – APPLY ONLINECLICK HERE
ADMINISTRATIVE ASSISTANT – APPLY ONLINE CLICK HERE
Telegram Join LinkClick Here
WhatsApp Group LinkClick Here

ಇತರೆ ಮಾಹಿತಿ : ಅಭ್ಯರ್ಥಿಗಳು ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment