ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2020 | SBI PO 2020 Notification

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2020 | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಪ್ರೊಬೇಷನರಿ ಆಫೀಸರ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 2000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :
ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 23,700 – ರೂ. 42,020 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ವಯೋಮಾನ :
ದಿನಾಂಕ ಏಪ್ರಿಲ್ 01, 2020ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
2ಎ, 2ಬಿ, 3ಎ, 3ಬಿ ಅಭ್ಯರ್ಥಿ – 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿ – 5 ವರ್ಷ
(ಎಸ್ಸಿ/ ಎಸ್ಟಿ) ಪಿಡಬ್ಲ್ಯೂಡಿ ಅಭ್ಯರ್ಥಿ – 15 ವರ್ಷ
(ಒಬಿಸಿ) ಪಿಡಬ್ಲ್ಯೂಡಿ ಅಭ್ಯರ್ಥಿ – 13 ವರ್ಷ
(ಸಾಮಾನ್ಯ) ಪಿಡಬ್ಲ್ಯೂಡಿ ಅಭ್ಯರ್ಥಿ – 10 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಶೈಕ್ಷಣಿಕ ಅರ್ಹತೆಯನ್ನು ಅಂಗೀಕೃತ ವಿದ್ಯಾ‌ಸಂಸ್ಥೆಯಿಂದ ಪಡೆದಿರಬೇಕು.

ಉದ್ಯೋಗ ಮಾಹಿತಿ : ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಉದ್ಯೋಗಾವಕಾಶ

ಆಯ್ಕೆ ವಿಧಾನ :
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಅಧಿಕೃತ ವೆಬ್‌ಸೈಟ್. www.sbi.co.inವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಉಳಿದ ಅಭ್ಯರ್ಥಿಗಳು ರೂ.750 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 14, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 04, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 04, 2020
ಪ್ರಿಲಿಮಿನರಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ದಿನಾಂಕ : ಡಿಸೆಂಬರ್ 3ನೇ ವಾರ
ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಡಿಸೆಂಬರ್ 31, 2020 ರಿಂದ ಜನವರಿ 05, 2021
ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ : ಜನವರಿ 3ನೇ ವಾರ
ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ದಿನಾಂಕ : ಜನವರಿ 3ನೇ ವಾರ
ಆನ್‌ಲೈನ್‌ ಮುಖ್ಯ ಪರೀಕ್ಷೆ ದಿನಾಂಕ : ಜನವರಿ 29, 2020
ಮುಖ್ಯ ಪರೀಕ್ಷೆ ಫಲಿತಾಂಶ ದಿನಾಂಕ : ಜನವರಿ 3ನೇ/ 4ನೇ ವಾರ

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.