Karnataka Legislative Assembly KLA Recruitment 2024 : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Legislative Assembly KLA Recruitment 2024 : Details of Vacancies
ಹುದ್ದೆ :
ಮಾತೃ ವೃಂದದಲ್ಲಿ – ವರದಿಗಾರರು, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್
ಕಲ್ಯಾಣ ಕರ್ನಾಟಕ ವೃಂದದಲ್ಲಿ – ಜ್ಯೂನಿಯರ್ ಪ್ರೋಗ್ರಾಮರ್, ವರದಿಗಾರರು, ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕರು, ಕಿರಿಯ ಗ್ರಂಥಾಲಯ ಸಹಾಯಕರು, ಮಸಾಜರ್, ಬಡಗಿ, ದಲಾಯತ್, ಸ್ವೀಪರ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 37 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಮಾತೃ ವೃಂದ | ಹೈ-ಕ ವೃಂದ |
ಜ್ಯೂನಿಯರ್ ಪ್ರೋಗ್ರಾಮರ್ | – | 1 |
ವರದಿಗಾರರು | 4 | 3 |
ಕಂಪ್ಯೂಟರ್ ಆಪರೇಟರ್ | 3 | 1 |
ಕಿರಿಯ ಸಹಾಯಕರು | – | 1 |
ಕಿರಿಯ ಗ್ರಂಥಾಲಯ ಸಹಾಯಕರು | – | 1 |
ಮಸಾಜರ್ | – | 1 |
ಬಡಗಿ | – | 1 |
ದಲಾಯತ್ | 16 | 1 |
ಸ್ವೀಪರ್ | 1 | 3 |
ಶೈಕ್ಷಣಿಕ ಅರ್ಹತೆ :
• ಜ್ಯೂನಿಯರ್ ಪ್ರೋಗ್ರಾಮರ್ – ಕಂಪ್ಯೂಟರ್ ಸೈನ್ಸ್/ ಮಾಹಿತಿ ವಿಜ್ಞಾನ/ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವೀಧರರಾಗಿರಬೇಕು ಅಥವಾ ಎಂ.ಸಿ.ಎ ಪದವಿ ಹೊಂದಿರಬೇಕು.
• ವರದಿಗಾರರು – ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
• ಕಂಪ್ಯೂಟರ್ ಆಪರೇಟರ್ – ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕ ಪದವಿ (ಬಿ.ಸಿ.ಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು.
• ಕಿರಿಯ ಸಹಾಯಕರು – ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.
• ಕಿರಿಯ ಗ್ರಂಥಾಲಯ ಸಹಾಯಕರು – ಲೈಬ್ರರಿ ಸೈನ್ಸ್ ನಲ್ಲಿ ಪದವಿ ಹೊಂದಿರಬೇಕು.
• ಮಸಾಜರ್ – 7ನೇ ತರಗತಿ ಉತ್ತೀರ್ಣ. ಅನುಭವ ಹೊಂದಿರಬೇಕು.
• ಬಡಗಿ – ಎಸ್.ಎಸ್.ಎಲ್.ಸಿ ಉತ್ತೀರ್ಣ. ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
• ದಲಾಯತ್ – 7ನೇ ತರಗತಿಯಲ್ಲಿ ಉತ್ತೀರ್ಣ.
• ಸ್ವೀಪರ್ – 4ನೇ ತರಗತಿ ಉತ್ತೀರ್ಣ.
ಉದ್ಯೋಗ ಮಾಹಿತಿ – ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಹುದ್ದೆ | ವೇತನ |
ಜ್ಯೂನಿಯರ್ ಪ್ರೋಗ್ರಾಮರ್ | 69500-134200 |
ವರದಿಗಾರರು | 61300-112900 |
ಕಂಪ್ಯೂಟರ್ ಆಪರೇಟರ್ | 49050-92500 |
ಕಿರಿಯ ಸಹಾಯಕರು | 34100-67600 |
ಕಿರಿಯ ಗ್ರಂಥಾಲಯ ಸಹಾಯಕರು | 34100-67600 |
ಮಸಾಜರ್ | 29600-52800 |
ಬಡಗಿ | 29600-52800 |
ದಲಾಯತ್ | 27000-46675 |
ಸ್ವೀಪರ್ | 27000-46675 |
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದುಕೊಳ್ಳಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001
ನಿಗದಿತ ಅರ್ಜಿ ಶುಲ್ಕದ ವಿವರ : ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 25, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 25, 2024
Karnataka Legislative Assembly Recruitment 2024 : Important Links
NOTIFICATION – NHK | CLICK HERE |
NOTIFICATION – HK | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.